ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ: ದೂರು

Update: 2018-09-13 14:51 GMT

ಬೆಂಗಳೂರು, ಸೆ.13: ವಿದೇಶದಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ವಿದ್ಯಾರ್ಥಿಗಳಿಗೆ ಹಣ ವಂಚನೆ ಮಾಡಿರುವ ಆರೋಪದ ಮೇಲೆ‌ ಇಲ್ಲಿನ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಏಜೆಂಟ್‌ಗಳಾದ ಗೋಪಿನಾಥ್, ವೆಂಕಟ್, ಸಹಾಸ್ತಸುಮ್ ಎಂಬುವರ ಮೇಲೆ‌ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ಮಕ್ಕಳ ಭವಿಷ್ಯವನ್ನು ಬಂಡವಾಳ ಮಾಡಿಕೊಂಡ ವಂಚಕರು, ವಾಷಿಂಗ್ಟನ್ ಯೂನಿವರ್ಸಿಟಿ ಆಫ್ ಬಾರ್ಬಡಸ್ ನಲ್ಲಿ ಸೀಟ್ ಕೊಡಿಸುವ ಆಮಿಷ ಒಡ್ಡಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಪೋಷಕರಿಂದ 21 ಲಕ್ಷದವರೆಗೆ ಹಣ ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News