ಅರುಣ್ ಜೇಟ್ಲಿ ರಾಜೀನಾಮೆ ನೀಡಬೇಕಾದ ಅಗತ್ಯವಿಲ್ಲ: ಬಿಜೆಪಿ

Update: 2018-09-13 15:55 GMT

ಹೊಸದಿಲ್ಲಿ, ಸೆ.13: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿರುವುದನ್ನು ಬಿಜೆಪಿ ತಿರಸ್ಕರಿಸಿದೆ.

ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ “ಅರುಣ್ ಜೇಟ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಆವಶ್ಯಕತೆ ಇಲ್ಲ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ನೀಡಲಿ" ಎಂದು ಪ್ರತಿಕ್ರಿಯೆ ನೀಡಿದರು.

ಯುಪಿಎ ಸರಕಾರದ ಅವಧಿಯಲ್ಲಿ ಕೋಟಿಗಟ್ಟಲೆ ಹಣವನ್ನು ಯಾರೂ ದೋಚಿದ್ದಾರೋ ಅವರಿಂದ  ಹಣವನ್ನು ಮರಳಿ ಪಡೆಯಲು ವಿತ್ತ ಸಚಿವ ಅರುಣ್ ಜೇಟ್ಲಿ ಶ್ರಮಿಸುತ್ತಿದ್ದಾರೆ ಅವರಿಗೆ ದೇಶ ಜನತೆ ಕೃತಜ್ಞತೆ ಸಲ್ಲಿಸಬೇಕಾಗಿದೆ ಎಂದರು.

ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗುವ ಮುನ್ನ 2016, ಮಾ.2ರಂದು ಪಾರ್ಲಿಮೆಂಟ್ ನ ಸೆಂಟ್ರಲ್ ಹಾಲ್ ನಲ್ಲಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದರು ಎಂದು ಕಾಂಗ್ರೆಸ್ ನಾಯಕ ಪಿ.ಎಲ್ . ಪೂನಿಯಾ ಮಾಡಿರುವ ಆರೋಪವನ್ನು ಇದೇ ವೇಳೆ ಸಚಿವ ಗೋಯಲ್ ಅಲ್ಲಗೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News