ಹಾಸನ: ಕೇಂದ್ರ ಸರಕಾರದ ವಿರುದ್ಧ ಕರವೇ ಪ್ರತಿಭಟನೆ

Update: 2018-09-14 12:00 GMT

ಹಾಸನ,ಸೆ.14: ಕರ್ನಾಟಕದಲ್ಲಿ ವಿವಿಧ ಪರೀಕ್ಷೆಗಳನ್ನು ಹಿಂದಿಯಲ್ಲಿ ಬರೆಯಬೇಕು ಎಂದು ಸೂಚಿಸಿದ್ದಾರೆಂದು ಆರೋಪಿಸಿ ಕೇಂದ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟಿಸಿ, ಪ್ರತಿಕೃತಿ ದಹಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟಿಸಿ, ಯಾವುದೇ ಒಂದು ಉದ್ಯೋಗವಕಾಶ ಸಿಗಬೇಕಾದರೆ ಪರೀಕ್ಷೆ ಬರೆಯಲು ಕೇಂದ್ರ ಸರಕಾರ ಕರ್ನಾಟಕ ರಾಜ್ಯದ ಮೇಲೆ ಬಲವಂತದಲ್ಲಿ ಹಿಂದಿ ಭಾಷೆಯನ್ನು ಏರಿರುವುದು ಸರಿಯಾದ ಕ್ರಮವಲ್ಲ. ಕರ್ನಾಟಕದಲ್ಲಿ ಕನ್ನಡಿಗರಿಗೆ ಕನ್ನಡ ಭಾಷೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು. ನೇಮಕಾತಿಗೆ ಹಿಂದಿಯಲ್ಲಿ ಪರೀಕ್ಷೆ ಬರೆಸಿ ಕನ್ನಡಿಗರ ಮನಸ್ಸಿಗೆ ನೋವು ತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.

ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮ. ಬಲವಂತವಾಗಿ ಹಿಂದಿ ಭಾಷೆಯನ್ನು ಕನ್ನಡಿಗರ ಮೇಲೆ ಏರಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಕರವೇ ತಾಲೂಕು ಅಧ್ಯಕ್ಷ ಶಿವಣ್ಣ ಗೌಡ ಎಚ್ಚರಿಸಿದರು.

ಹೇಮಾವತಿ ಪ್ರತಿಮೆ ಮುಂಬಾಗ ಕೇಂದ್ರ ಸರಕಾರದ ಪ್ರತಿಕೃತಿ ದಹಿಸಿದಲ್ಲದೇ, ಸರಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕೆಲ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News