ಬೈಕ್ ಢಿಕ್ಕಿ: ಅಪರಿಚಿತ ಯುವಕ ಮೃತ್ಯು

Update: 2018-09-14 15:19 GMT

ಬೆಂಗಳೂರು, ಸೆ.14: ಶರವೇಗವಾಗಿ ಸಾಗುತ್ತಿದ್ದ ಬೈಕ್‌ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು 25 ವರ್ಷದ ಯುವಕನಂತೆ ಕಾಣುವ ಬೈಕ್ ಸವಾರನ ಹೆಸರು-ವಿಳಾಸ ತಿಳಿದುಬಂದಿಲ್ಲ. ಜಾಲಹಳ್ಳಿ ಲೇಜ್‌ನ 4ನೆ ಕ್ರಾಸ್, ಬಾಹುಬಲಿ ನಗರದ ಮೂಲಕ ಈತ ಮಧ್ಯರಾತ್ರಿ 12 ಗಂಟೆ ಸಂದರ್ಭದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಎನ್ನಲಾಗಿದೆ.

ಬಳಿಕ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈತನ ಹೆಸರು-ವಿಳಾಸ ತಿಳಿದುಬಂದಿಲ್ಲ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿಡಲಾಗಿದೆ. ವಾರಸುದಾರರು ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News