ಮಹದಾಯಿ ನ್ಯಾಯಾಧೀಕರಣ ತೀರ್ಪು: ಮುಂದಿನ ಕ್ರಮದ ಕುರಿತು ತಜ್ಞರೊಂದಿಗೆ ಸಿಎಂ ಚರ್ಚೆ

Update: 2018-09-14 15:29 GMT

ಬೆಂಗಳೂರು, ಸೆ.14: ಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಕುರಿತು ಮುಂದೆ ಕೈಗೊಳ್ಳಬೇಕಾದ ಕ್ರಮದ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶುಕ್ರವಾರ ಕಾನೂನು ಮತ್ತು ನೀರಾವರಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಮಹಾದಾಯಿ ನದಿ ಭಾಗದ ಜನರ ಹಿತದೃಷ್ಟಿಯಿಂದ ಸರಕಾರ ಕೈಗೊಳ್ಳಬೇಕಾದ ಕ್ರಮಗಳನ್ನು ಎಲ್ಲ ಆಯಾಮಗಳಿಂದ ಪರಿಶೀಲಿಸಿ, ಚರ್ಚಿಸಿ ಸಲಹೆ ನೀಡುವಂತೆ ಮುಖ್ಯಮಂತ್ರಿ ಸಭೆಯಲ್ಲಿ ಕೋರಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಉದಯ ಹೊಳ್ಳ, ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್, ನೀರಾವರಿ ತಜ್ಞರು, ಹಿರಿಯ ವಕೀಲರು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News