ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಉತ್ಸಾಹಿಗಳನ್ನು ನೇಮಿಸಿ: ಹಾಜಿ ಶಪಿಉಲ್ಲಾ

Update: 2018-09-14 16:23 GMT

ಬೆಂಗಳೂರು, ಸೆ.14: ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಿ, ಉತ್ಸಾಹಿ ಹಾಗೂ ದಕ್ಷರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಶಪಿಉಲ್ಲಾ ಒತ್ತಾಯಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸನ್ನು ತಳ ಮಟ್ಟದಿಂದ ಗಟ್ಟಿಗೊಳಿಸಬೇಕಾಗಿದೆ. ಇದಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪಾತ್ರ ಮಹತ್ವದಾಗಿರುತ್ತದೆ. ಹೀಗಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿಲ್ಲದ, ಜವಾಬ್ದಾರಿಯನ್ನು ನಿರ್ವಹಿಸದ ಬ್ಲಾಕ್ ಅಧ್ಯಕ್ಷರುಗಳನ್ನು ಕೂಡಲೆ ಬದಲಾವಣೆ ಮಾಡಿ, ನಿಪುಣರು ಹಾಗೂ ಸಕ್ರಿಯವಾಗಿ ಕಾರ್ಯನಿರ್ವಹಿಸುವವರನ್ನು ಗುರುತಿಸಬೇಕಾಗಿದೆ.

10 ವರ್ಷ ಹಾಗೂ ಎರಡು ಅವಧಿಯಲ್ಲಿ ಯಶಸ್ವಿಯಾಗಿ ನಿರ್ವಹಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನಾಗಿ ನೇಮಕ ಮಾಡುವಂತೆ ಸ್ಥಳೀಯ ನಾಯಕರು ಕೆಪಿಸಿಸಿ ಪದಾಧಿಕಾರಿಗಳಿಗೆ ಸೂಚಿಸಬೇಕೆಂದು ಅವರು ಪತ್ರಿಕಾ ಪ್ರಕಟನೆ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News