ಮಾದಕ ವಸ್ತು ಮಾರಾಟ: ಆಫ್ರಿಕಾ ಮೂಲದ ಆರೋಪಿ ಸೆರೆ

Update: 2018-09-14 16:36 GMT

ಬೆಂಗಳೂರು, ಸೆ.14: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ವಿದೇಶಿ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಫ್ರಿಕಾ ಮೂಲದ ಪ್ರಜೆ ಅಝಾಮ್ ನಿಝಾರ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಪರಿಚಿತರಿಂದ ಗಾಂಜಾ ಖರೀದಿಸಿ ವ್ಯವಸ್ಥಿತವಾಗಿ ಕಾಲೇಜು ವಿದ್ಯಾರ್ಥಿ ಹಾಗೂ ಗಿರಾಕಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಕ್ಕೆ ಸಂಚು ರೂಪಿಸಿದ್ದ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ ಒಂದು ಕೆಜಿ ಗಾಂಜಾ, ಬೈಕ್, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News