ಅಕ್ರಮ ಗಾಂಜಾ ಮಾರಾಟ: ಓರ್ವನ ಸೆರೆ

Update: 2018-09-14 17:01 GMT

ಉಡುಪಿ, ಸೆ.14: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ನನ್ನು ಉಡುಪಿ ಡಿಸಿಐಬಿ ಪೊಲೀಸರು ಸೆ.12ರಂದು ಉಡುಪಿ ಗುಂಡಿಬೈಲು ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಬಂಧಿಸಿದ್ದಾರೆ.

ಶಿರೂರು ಗ್ರಾಮದ ಕರಿಕಟ್ಟೆಯ ಮುಹಮ್ಮದ್ ಇಕ್ಬಾಲ್ (41) ಬಂಧಿತ ಆರೋಪಿ. ಈತನಿಂದ 530 ಗ್ರಾಂ ತೂಕದ ಗಾಂಜಾ, ಬಜಾಜ್ ಡಿಸ್ಕವರಿ ಬೈಕ್, ಮೊಬೈಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 71,000ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ಬ.ನಿಂಬರ್ಗಿ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮತ್ತು ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಉಡುಪಿ ಡಿಸಿಐಬಿ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್, ಪೊಲೀಸ್ ಉಪನಿರೀಕ್ಷಕ ನಿತ್ಯಾನಂದ ಗೌಡ, ಡಿಸಿಐಬಿ ಎಎಸ್ಸೈ ರವಿಚಂದ್ರ ಹಾಗೂ ಸಿಬ್ಬಂದಿಗಳಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಪ್ರವೀಣ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಈ ಕಾರ್ಯಾಚರಣೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News