ಪೆಟ್ರೋಲ್ ಪಂಪ್‌ನಲ್ಲಿ ಬೈಕ್‌ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ

Update: 2018-09-15 06:22 GMT

ಚೆನ್ನೈ, ಸೆ.15: ಯುವಕನೊಬ್ಬ ಪೆಟ್ರೋಲ್ ಪಂಪ್‌ನಲ್ಲಿ ತನ್ನ ಬೈಕ್‌ಗೆ ಪೆಟ್ರೋಲ್ ತುಂಬಿಸಿಕೊಂಡು ಇನ್ನೇನು ಬೈಕ್‌ನ್ನು ಸ್ಟಾರ್ಟ್ ಮಾಡಬೇಕೆನ್ನುವಷ್ಟರಲ್ಲಿ ಬೈಕ್‌ಗೆ ಬೆಂಕಿ ಹತ್ತಿಕೊಂಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ.

 ಘಟನೆಯಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೈಕ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ದೃಶ್ಯ ಪೆಟ್ರೋಲ್ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 ಪೆಟ್ರೋಲ್ ಬಂಕ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ತುಂಬಿಸಿಕೊಂಡ ಟೀ-ಶರ್ಟ್ ಧರಿಸಿದ್ದ ಯುವಕ ಹಣ ನೀಡಿ ಬೈಕ್ ಏರಿ ಸ್ಟಾರ್ಟ್ ಮಾಡಿದ ತಕ್ಷಣವೇ ಬೈಕ್‌ಗೆ ಒಂದೇ ಸಮನೆ ಬೆಂಕಿ ಹತ್ತಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿದೆ.

ಬೆಂಕಿಯು ಯುವಕನ ಟೀ-ಶರ್ಟ್‌ಗೆ ಹೊತ್ತಿಕೊಂಡ ತಕ್ಷಣ ಪೆಟ್ರೋಲ್ ಬಂಕ್‌ನ ಸಿಬ್ಬಂದಿಗಳು ಆತನ ನೆರವಿಗೆ ಧಾವಿಸಿದರು. ಘಟನೆಯಲ್ಲಿ ಸುಟ್ಟಗಾಯಕ್ಕೀಡಾಗಿರುವ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News