ಹೂಡೆ: ಮಳೆ ನೀರು ಕೊಯ್ಲು ಮಾಹಿತಿ ಕಾರ್ಯಕ್ರಮ

Update: 2018-09-15 12:48 GMT

ಉಡುಪಿ, ಸೆ.15: ಜೆಸಿಐ ಕಲ್ಯಾಣಪುರ ಆಶ್ರಯದಲ್ಲಿ ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಮಳೆ ನೀರು ಕೊಯ್ಲು ಮತ್ತು ಜಲ ಮರುಪೂರಣ ವ್ಯವಸ್ಥೆ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿ ಜೆಸಿಐಯ ಸಂತೋಷ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಲ್ಯಾಣಪುರ ಜೆಸಿಐ ಅಧ್ಯಕ್ಷ ಉಮೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಮುಖ್ಯ ಅತಿಥಿಯಾಗಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಜೋಸೆಫ್ ಜಿ.ಎಂ.ರೆಬೆಲ್ಲೋ ಭೂಮಿಯ ಮೇಲೆ ಬಿದ್ದ ಮಳೆ ನೀರನ್ನು ವ್ಯರ್ಥವಾಗಿ ಹರಿದು ಹೋಗಲು ಬಿಡದೆ ಸೂಕ್ತ ರೀತಿಯಲ್ಲಿ ಮರುಪೂರಣಗೊಳಿಸಿ ಜಲಕ್ಷಾಮವನ್ನು ತಡೆಯಬಹುದೆಂದು ಪ್ರಾತ್ಯಕ್ಷಿಕೆ ಸಹಿತ ವಿವರಿಸಿದರು. ಉಮೇಶ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಸುನಂದ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News