ಸರಪಾಡಿ ಬಹುಗ್ರಾಮ ಕುಡಿಯುವ ನೀರು ಯೋಜನೆ: ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿ ಪೂಜೆ

Update: 2018-09-15 13:03 GMT

ಬಂಟ್ವಾಳ, ಸೆ. 15: ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕಿನ ಸರಪಾಡಿ ಮತ್ತು ಇತರ 97 ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಸರಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಕ್ಕಿದಕಾಡುವಿನಲ್ಲಿ ಶನಿವಾರ ಗುದ್ದಲಿ ಪೂಜೆ ಕಾರ್ಯಕ್ರಮ ಜರಗಿತು.

ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರು ಗುದ್ದಲಿ ಪೂಜೆ ನೆರ ವೇರಿಸಿ ಮಾತನಾಡಿ, ನಿಗದಿತ ಸಮಯದೊಳಗೆ ಉತ್ತಮ ಗುಣಮಟ್ಟದಿಂದ ಕಾಮಗಾರಿಯನ್ನು ನಿರ್ಮಿಸುವಂತೆ ಸೂಚಿಸಿದರು.

ಗ್ರಾಪಂ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ದಯಾನಂದ ಶೆಟ್ಟಿ ಮುನ್ನಲಾಯಿ, ಜಿಪಂ ಸದಸ್ಯ ಪದ್ಮಶೇಖರ ಜೈನ್, ತಾಪಂ ಸದಸ್ಯ ಸ್ವಪ್ನಾ ವಿಶ್ವನಾಥ, ಗ್ರಾಪಂ ಸದಸ್ಯರಾದ ಧನಂಜಯ ಶೆಟ್ಟಿ, ಪ್ರೇಮಾ, ವಿನ್ಸೆಂಟ್ ಪಿಂಟೋ, ಶಿವಪ್ಪ ಪೂಜಾರಿ, ಆದಂ ಕುಂಞÂ, ಡೆನಿಸ್ ಮೊರಾಸ್, ಸರಪಾಡಿ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ, ಸರಪಾಡಿ ದೇವಸ್ಥಾನ ಮೊಕ್ತೇಸರ ಗಿರಿಧರ ಎಸ್., ಪ್ರಮುಖರಾದ ಸಂದೀಪ್ ಕೋಟ್ಯಾನ್, ಶಾಂಭವಿ, ಗುತ್ತಿಗೆದಾರ ಸುಧಾಕರ ಶೆಟ್ಟಿ, ಪಂಚಾಯತ್ ರಾಜ್ ಬಂಟ್ವಾಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಿ. ನರೇಂದ್ರ ಬಾಬು, ಕಿರಿಯ ಅಭಿಯಂತರ ಕೃಷ್ಣ , ಪಂ.ಅ.ಅಧಿಕಾರಿ ರಾಜಶೇಖರ ರೈ ಮತ್ತಿತರರು ಉಪಸ್ಥಿತರಿದ್ದರು.

ಸರಪಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಪೆರ್ಲ-ಬೀಯಪಾದೆಯಲ್ಲಿ ಕಳೆದ ಮಾ. 25ರಂದು ಆಗಿನ ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ಗುದ್ದಲಿ ಪೂಜೆ ನೆರವೇರಿಸಿದ್ದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮನ್ನು ಕಡೆಗಣಿಸಿರುವುದಾಗಿ ಸರಪಾಡಿ ಗ್ರಾಮ ಪಂಚಾಯತ್ ಆಡಳಿತ ಆರೋಪಿಸಿತ್ತು.

ಇದೀಗ ಅದೇ ಯೋಜನೆಗೆ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತೆಕ್ಕಿದಕಾಡುವಿನಲ್ಲಿ ಗುದ್ದಲಿ ಪೂಜೆ ನಡೆಸಲಾಗಿದೆ ಎಂದು ಅಭಿಯಂತರ ಜಿ. ನರೇಂದ್ರ ಬಾಬು ತಿಳಿಸಿದ್ದಾರೆ. ಈ ಯೋಜನೆ 32.90 ಕೋ. ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಇದರಿಂದ ಈ ಭಾಗದ ಮನೆಗಳಿಗೆ ಶುದ್ಧನೀರು ಪೂರೈಕೆಯಾಗಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News