ಗುಂಡ್ಲುಪೇಟೆ: ನಕಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Update: 2018-09-15 13:06 GMT

ಗುಂಡ್ಲುಪೇಟೆ,ಸೆ.15: ಜಿಲ್ಲಾ ಅಪರಾಧ ತಡೆ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ನಕಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.

ಪಟ್ಟಣದ ನಿವಾಸಿಗಳಾದ ಸಿವಾನ್ ಹಾಗೂ ಅನ್ಸಾರ್ ಎಂಬ ಆರೋಪಿಗಳು ಬೇಕಿಂಗ್ ಸೋಡಾ, ವಿವಿಧ ಮಾತ್ರೆಗಳ ಪುಡಿಯನ್ನು ಮಿಶ್ರಣ ಮಾಡಿ ಬ್ರೌನ್ ಶುಗರ್ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಅಪರಾಧ ತಡೆ ವಿಭಾಗದ ಇನ್ಸ್ ಪೆಕ್ಟರ್ ರವೀಂದ್ರ, ಪಿಎಸ್‍ಐ ಸಾಗರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಂಧೆಯ ಕಿಂಗ್‍ಪಿನ್ ಬಗ್ಗೆ ಖಚಿತ ಮಾಹಿತಿಯಿದ್ದು ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News