ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಕೋರಿಕೆ ಸಲ್ಲಿಸಿಲ್ಲ: ತಮಿಳುನಾಡು ರಾಜ್ಯಪಾಲರ ಸ್ಪಷ್ಟನೆ

Update: 2018-09-15 13:56 GMT

ಚೆನ್ನೈ, ಸೆ.15: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸಬೇಕೆಂಬ ಕೋರಿಕೆಯನ್ನು ತಾನು ಕೇಂದ್ರ ಸರಕಾರಕ್ಕೆ ಕಳುಹಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನು ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಿರಾಕರಿಸಿದ್ದಾರೆ.

ಈ ಕುರಿತು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನ್ಯಾಯೋಚಿತ ಮತ್ತು ಸೂಕ್ತವಾದ ರೀತಿಯಲ್ಲಿ ನಿರ್ಧಾರವೊಂದನ್ನು ಕೈಗೊಳ್ಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜೀವ್ ಹಂತಕರ ಬಿಡುಗಡೆ ಕೋರಿದ ಮನವಿಯನ್ನು ತಾನು ಗೃಹ ಸಚಿವಾಲಯಕ್ಕೆ ಕಳುಹಿಸಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಲ್ಲದೆ ಕೆಲವು ಟಿವಿ ಚಾನೆಲ್‌ಗಳಲ್ಲೂ ಈ ಕುರಿತು ಚರ್ಚೆ ನಡೆದಿದೆ. ಇದೊಂದು ಸಂಕೀರ್ಣ ಪ್ರಕರಣವಾಗಿದ್ದು ಆಡಳಿತಾತ್ಮಕ, ಸಂವಿಧಾನಾತ್ಮಕ ಹಾಗೂ ಕಾನೂನಿಗೆ ಸಂಬಂಧಿಸಿದ ಅಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕಿದೆ. ಈ ಪ್ರಕರಣದಲ್ಲಿ ಕೋರ್ಟು ನೀಡಿದ ತೀರ್ಪಿನ ಪ್ರತಿ ತನಗೆ ಸೆ.14ರಂದು ತಲುಪಿದೆ. ತೀರ್ಪನ್ನು ಕೂಲಂಕುಷವಾಗಿ ಪರಿಶೀಲಿಸಿ, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News