​ಕುಂಭಾಶಿ: ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದಿಂದ ದಾಳಿ

Update: 2018-09-15 14:59 GMT

ಉಡುಪಿ, ಸೆ.15: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಕುಂಭಾಶಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಲಾಯಿತು.

ದಾಳಿಯ ವೇಳೆ ಒಟ್ಟು 16 ಪ್ರಕರಣಗಳನ್ನು ದಾಖಲಿಸಿ, 1600 ರೂ. ದಂಡ ವಸೂಲಿ ಮಾಡಲಾಯಿತು. ಪರಿಸರದ ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು.

ದಾಳಿಯಲ್ಲಿ ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೃಷ್ಣಪ್ಪ, ಹಿರಿಯ ಆರೋಗ್ಯ ಸಹಾಯಕ ಸದಾನಂದ್ ಹೆಬ್ಬಾರ್, ಕುಂದಾಪುರ ಪುರಸಬೆಯ ಶರತ್, ಸಮಾಜಕಾರ್ಯಕರ್ತೆ ಶೈಲಾ ಎಸ್.ಎಂ. ಹಾಗೂ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News