ಬ್ರಹ್ಮಾವರ: ಉಚಿತ ಸ್ವ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನ

Update: 2018-09-15 15:21 GMT

ಬ್ರಹ್ಮಾವರ, ಸೆ.15: ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ ಗಾಗಿ ಉಡುಪಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 18ರಿಂದ 45ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೆ.24ರಿಂದ ಅ.3ರವರೆಗೆ ಪಾಸ್ಟ್‌ಫುಡ್ ತಯಾರಿ ತರಬೇತಿ ಹಾಗೂ ಅ.1ರಿಂದ ಅ.30ರವರೆಗೆ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಉದ್ಯಮ ನಿರ್ವಹಣೆ ಹಾಗೂ ಬ್ಯಾಂಕಿಂಗ್ ವ್ಯವಹಾದ ಬಗ್ಗೆ ಮಾಹಿತಿ ನೀಡಲಾಗುವುದು.

ಆಸಕ್ತರು ಕೂಡಲೇ ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ವಯಸ್ಸು, ವಿದ್ಯಾರ್ಹತೆ ಅನುಭವಗಳ ವಿವರಗಳೊಂದಿಗೆ ತಕ್ಷಣ ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, 52ನೇ ಹೇರೂರು, ಬ್ರಹ್ಮಾವರ-576213 ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ದೂರವಾಣಿ ಸಂಖ್ಯೆ 0820-2563455 ಸಂಪಕಿಸರ್ಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News