ಪೆಟ್ರೋಲ್ ಲೀಟರ್ ಗೆ 89 ರೂ. !

Update: 2018-09-15 15:47 GMT

ಮುಂಬೈ, ಸೆ. 15: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಶನಿವಾರ ದಾಖಲೆ ಏರಿಕೆ ಕಂಡಿದೆ. ನಾಲ್ಕು ಮೆಟ್ರೋಗಳಲ್ಲಿ ಮುಂಬೈ ಗರಿಷ್ಠ ಏರಿಕೆಗೆ ಸಾಕ್ಷಿಯಾಗಿದೆ. ರಾಷ್ಟ್ರ ಸ್ವಾಮಿತ್ವದ ತೈಲ ಕಂಪೆನಿ (ಒಎಂಸಿ)ಗಳು ಹೊರಡಿಸಿದ ದಿನನಿತ್ಯದ ಬೆಲೆ ಅಧಿಸೂಚನೆಯ ಪ್ರಕಾರ ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ. 89.01, ಡೀಸೆಲ್ ಬೆಲೆ ಲೀಟರ್‌ಗೆ ರೂ. 78.07. ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ. 81.63, ಡೀಸೆಲ್ ಬೆಲೆ ಲೀಟರ್‌ಗೆ ರೂ. 73.54ಕ್ಕೆ ಮಾರಾಟವಾಗುತ್ತಿದೆ.

ದಿಲ್ಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಅತ್ಯಧಿಕ ಬೆಲೆಗೆ ಮಾರಾಟವಾಗುತ್ತಿದೆ. ಆದರೆ, ನಾಲ್ಕು ಮೆಟ್ರೋಗಳಿಗೆ ಹೋಲಿಸಿದರೆ ದಿಲ್ಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ಗೆ ಬೆಲೆ ಕಡಿಮೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ. 83.49 ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ ರೂ. 75.39. ಚೆನ್ನೈಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ರೂ. 84.95 ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ ರೂ. 77.74. ಆಗಸ್ಟ್ 1ರಿಂದ ಪೆಟ್ರೋಲ್ ಬೆಲೆ ಶೇ. 6 ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಡೀಸೆಲ್ ಬೆಲೆ ಶೇ. 8 ಏರಿಕೆಯಾಗಿದೆ. ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 78 ಡಾಲರ್‌ಗೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ತೈಲ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಭಾರತ ಶೇ. 80ರಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಆದರೆ, ರೂಪಾಯಿ ಮೌಲ್ಯ ಕುಸಿತ ಆಮದು ದುಬಾರಿಯಾಗಿಸಿದೆ ಹಾಗೂ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News