×
Ad

ಸುಲಿಗೆ ಆರೋಪ: ನಾಲ್ವರ ಬಂಧನ

Update: 2018-09-15 22:17 IST

ಬೆಂಗಳೂರು, ಸೆ.15: ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ನಗರದ ಚಂದ್ರಾ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ಮನು, ಹರೀಶ್, ಶ್ರೀನಿವಾಸ್ ಹಾಗೂ ಸಂತೋಷ್‌ಕುಮಾರ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಸುಲಿಗೆ ಮಾಡುವುದಕ್ಕಾಗಿಯೇ ಗುಂಪು ಕಟ್ಟಿಕೊಂಡು ಕಳೆದ ಸೆ.1 ರಂದು ರಾಜರಾಜೇಶ್ವರ ನಗರ ಠಾಣಾ ವ್ಯಾಪ್ತಿಯ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ಮಾಡಿ, ಅದೇ ದಿನ ನಾಗರಭಾವಿ ಬಳಿ ನಿಲ್ಲಿಸಿದ್ದ ಕಾರಿನ ಗಾಜು ಹೊಡೆದು ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡ ಚಂದ್ರಾ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 5 ಲಕ್ಷ ರೂ ಮೌಲ್ಯದ ಕಾರು, ಬೈಕ್ ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News