ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ಟಿಕೆಟ್ ಅವ್ಯವಹಾರ ಆರೋಪ; ಮೂವರ ಅಮಾನತು
Update: 2018-09-15 22:26 IST
ಮೈಸೂರು,ಸೆ.15: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಪ್ರವೇಶ ಟಿಕೇಟ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತು ಮಾಡಲಾಗಿದೆ.
ಚಾಮುಂಡೇಶ್ವರಿ ದೇವಾಲಯದ ಸಿಬ್ಬಂದಿ ಎಂ.ಡಿ.ರಾಜು, ಆನಂದ್ ಹಾಗೂ ಪ್ರಕಾಶ್ ಅಮಾನತುಗೊಂಡವರಾಗಿದ್ದಾರೆ. ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರ ಆದೇಶದ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್, ಮೂವರನ್ನು ಅಮಾನತುಗೊಳಿಸಿದ್ದಾರೆ.
ಚಾಮುಂಡಿಬೆಟ್ಟದಲ್ಲಿ ಗಣಕೀಕೃತ ಟಿಕೇಟ್ ವ್ಯವಸ್ಥೆಯಲ್ಲಿ ಅವ್ಯವಹಾರ ನಡೆದಿದ್ದು, ಭಕ್ತರ ಸುಮಾರು 8 ಲಕ್ಷರೂ.ಹಣ ವಂಚಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಅಮಾನತು ಆದೇಶ ಹೊರಡಿಸಲಾಗಿದೆ.