ಹಾಸನದಲ್ಲಿ ಎಸ್ಸೆಸ್ಸೆಫ್ ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ- 2018

Update: 2018-09-16 08:00 GMT

ಹಾಸನ, ಸೆ.16: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಕೊಡಗು, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳ ಸಕ್ರಿಯ ಕಾರ್ಯಕರ್ತರ 'ಟೀಮ್ ಹಸನೈನ್ ಟ್ರೈನಿಂಗ್ ಕ್ಯಾಂಪ್ ಖಿಯಾದ -2018' ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆಅಧ್ಯಕ್ಷತೆಯಲ್ಲಿ ಹಾಸನದ ಮಸ್ಜಿದ್ ಖುಬಾ ಶರೀಫ್ ಕಾಲನಿಯಲ್ಲಿ ನಡೆಯಿತು.

ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ತರಗತಿಯನ್ನು ನಡೆಸಿದರು. 

ಶರೀಫ್ ಬೆಂಗಳೂರು ಹಾಗೂ ಇಕ್ಬಾಲ್ ಮಂಗಳಪೇಟೆ ನೇತೃತ್ವದಲ್ಲಿ ಬ್ಯಾನರ್ ಬರೆಯುವ ಮೂಲಕ ಪ್ರಾಯೋಗಿಕ ತರಗತಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಜಾಫರ್ ಹಾಸನ, ಹಾಸನ ಜಿಲ್ಲಾಧ್ಯಕ್ಷ ಸುಲೈಮಾನ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ನಾಯಕ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News