ಮಂಡ್ಯ: ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Update: 2018-09-16 15:20 GMT

ಮಂಡ್ಯ, ಸೆ.16: ಗಣೇಶ ವಿಸರ್ಜನೆ ವೇಳೆ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನವೀನ್ ಕುಮಾರ್(28) ಮೃತ ದುರ್ದೈವಿ. ಈತ ಶನಿವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿದ್ದನು ಎನ್ನಲಾಗಿದೆ.
ರವಿವಾರ ಬೆಳಗ್ಗೆ ಯುವಕನ ಶವ ಪತ್ತೆಯಾಗಿದ್ದು, ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ನೀಡಲಾಯಿತು.
ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News