ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಆರೋಪ: ಓರ್ವ ಸೆರೆ

Update: 2018-09-16 16:30 GMT

ಮಂಗಳೂರು, ಸೆ.16: ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಯುವತಿಯರನ್ನು ವೇಶ್ಯಾವಾಟಿಕೆಗೆ ಒದಗಿಸುತ್ತಿದ್ದ ದಲ್ಲಾಳಿ (ಪಿಂಪ್) ಓರ್ವನನ್ನು ರವಿವಾರ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಮೂವರು  ಯುವತಿಯರನ್ನು ರಕ್ಷಿಸಲಾಗಿದೆ.

ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬಾಳುಗೋಡಿ ನಿವಾಸಿ ದೀಪಕ್(43) ಬಂಧಿತ ಆರೋಪಿ.

ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಕಂಫರ್ಟ್ ಲಾಡ್ಜ್‌ನಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಈ ವೇಳೆ ಪಿಂಪ್ ಬಳಿಯಿದ್ದ ಎರಡು 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈ ವೇಶ್ಯಾವಾಟಿಕೆಯಲ್ಲಿ ಯುವತಿಯರನ್ನು ಒದಗಿಸುತ್ತಿದ್ದ ಇನ್ನು ಮೂವರು ದಲ್ಲಾಳಿಗಳಾದ ನಸೀರ್ ಉಪ್ಪಿನಂಗಡಿ, ನಸೀರ್ ಆಡ್ಯಾರ್ ಪದವು ಮತ್ತು ಜೀವನ್ ಪೂಜಾರಿ ಎಂಬವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಈ ಸಿಟಿ ಕಂಪರ್ಟ್ ಲಾಡ್ಜ್‌ನಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು ಎಂದು ತಿಳಿದುಬಂದಿದೆ. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಮೂವರು  ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಶಾಂತಾರಾಮ, ಪಿಎಸ್ಸೈ ಶ್ಯಾಮ್ ಸುಂದರ್, ಹಾಗೂ ಸಿಬ್ಬಂದಿ ಮತ್ತು ಮಂಗಳೂರು ಉತ್ತರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಸುರೇಶ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಮೂವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News