ಸರಕಾರ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡುತ್ತಿದೆ: ಸಚಿವ ಸಿ.ಎಸ್.ಪುಟ್ಟರಾಜು

Update: 2018-09-16 16:50 GMT

ಶ್ರೀರಂಗಪಟ್ಟಣ, ಸೆ.16: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರಕಾರ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚು ಒತ್ತು ನೀಡುತ್ತಿದೆ ಎಂದು ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಪಟ್ಟಣದ ರಿವರ್ ವ್ಯಾಲಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ 2018-19ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೇ ಅಂಜಿಕೆ ಇಲ್ಲದೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಆಗ ಮಾತ್ರ ಬದುಕು ಹಸನಾಗಲು ಸಾಧ್ಯ ಎಂದು ಎಂದು ಅವರು ಸಲಹೆ ನೀಡಿದರು.

ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಯ ಕೀರ್ತಿ ಬೆಳಗಬೇಕು. ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಹಕಾರ, ನೆರವು ದೊರಕಿಸಿಕೊಡಲು ಬದ್ಧವಾಗಿರುತ್ತೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಜಿ.ಆರ್.ಗೀತಾ, ರಿವರ್ ವ್ಯಾಲಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ರಾಮೇಗೌಡ, ಕಾರ್ಯದರ್ಶಿ ಆರ್.ರೂಪಶ್ರೀ ಕಿರಣ್, ಡಿವೈಎಸ್ಪಿ ಪಿ.ಬಿ.ವಿಶ್ವನಾಥ್, ಶಿಕ್ಷಕರಾದ ದಾಕ್ಷಾಯಿಣಿ, ಸುಮಾ, ರಂಗನಾಥ್, ಗಗನ ಇತರರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News