ಬಸ್ ಢಿಕ್ಕಿ: ಪಾದಾಚಾರಿ ಮೃತ್ಯು

Update: 2018-09-16 16:55 GMT

ಕಾರ್ಕಳ, ಸೆ.16: ಕಾರ್ಕಳ ಪೇಟೆಯ ಬಸ್ ನಿಲ್ದಾಣದಲ್ಲಿ ಸೆ.15ರಂದು ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಲೋಕು ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ನಿಲ್ದಾಣದಲ್ಲಿ ವಿಶಾಲ್ ಬಸ್ಸಿನ ಮುಂಭಾಗದಲ್ಲಿ ನಿಂತುಕೊಂಡಿದ್ದು, ಈ ವೇಳೆ ಚಾಲಕ ಬಸ್ಸನ್ನು ಏಕಾಎಕಿ ನಿರ್ಲಕ್ಷತನದಿಂದ ಮುಂದಕ್ಕೆ ಚಲಾಯಿಸಿ ಲೋಕು ಪೂಜಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸಂಜೆ ವೇಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲ ಕಾರಿಯಾಗದೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News