ದ್ವಿಚಕ್ರ ವಾಹನಗಳಿಗೆ ವಿನಾಯಿತಿ ನಿರಾಕರಿಸಿದ್ದ ಎನ್‌ಜಿಟಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Update: 2018-09-17 13:52 GMT

ಹೊಸದಿಲ್ಲಿ,ಸೆ.17: ದಿಲ್ಲಿಯಲ್ಲಿ ಸಮ-ಬೆಸ ವಾಹನ ಸಂಚಾರ ಯೋಜನೆಯನ್ನು ದ್ವಿಚಕ್ರ ವಾಹನಗಳಿಗೂ ಅನ್ವಯಿಸಬೇಕು ಎಂದು ನಿರ್ದೇಶಿಸಿರುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ(ಎನ್‌ಜಿಟಿ)ದ 2017ರ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯವು ಸೋಮವಾರ ತಡೆಯಾಜ್ಞೆ ನೀಡಿದೆ.

ಯೋಜನೆಯನ್ನು ದ್ವಿಚಕ್ರ ವಾಹನಗಳಿಗೂ ಅನ್ವಯಿಸಿದರೆ ಸಾರ್ವಜನಿಕ ಸಾರಿಗೆಗಳಲ್ಲಿ ಜನರಿಗೆ ಸ್ಥಳಾವಕಾಶ ಕಲ್ಪಿಸುವುದು ಕಷ್ಟವಾಗುತ್ತದೆ ಎಂದು ದಿಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎ.ಎನ್.ಎಸ್. ನಾಡಕರ್ಣಿ ಅವರು ನ್ಯಾಯಮೂರ್ತಿಗಳಾದ ಎಂ.ಬಿ.ಲೋಕೂರ್ ಮತ್ತು ದೀಪಕ ಗುಪ್ತಾ ಅವರ ಪೀಠಕ್ಕೆ ತಿಳಿಸಿದರು.

ಈ ಯೋಜನೆಯಡಿ ಸಮ ಮತ್ತು ಬೆಸ ನೋಂದಣಿ ಸಂಖ್ಯೆಗಳನ್ನು ಹೊಂದಿರುವ ವಾಹನಗಳು ದಿನ ಬಿಟ್ಟು ದಿನ ಸಂಚರಿಸಬೇಕಾಗುತ್ತದೆ.

ದಿಲ್ಲಿಯಲ್ಲಿ ಸುಮಾರು 68 ಲಕ್ಷ ದ್ವಿಚಕ್ರ ವಾಹನಗಳಿದ್ದು,ಅವುಗಳಿಗೆ ಈ ಯೋಜನೆಯಿಂದ ವಿನಾಯಿತಿ ನೀಡುವಂತೆ ನಾಡಕರ್ಣಿ ಕೋರಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News