ಕುಂದಾಪುರ: ಪ್ಲಾಸ್ಟಿಕ್ ವಸ್ತುಗಳಿಗೆ ನಿಷೇಧ

Update: 2018-09-17 14:15 GMT

ಉಡುಪಿ, ಸೆ.17: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಉಂಟು ಮಾಡುವ, ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿ ಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್ಸ್ ಹಾಗೂ ಊಟದ ಟೇಬಲ್‌ಗಳ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಥರ್ಮಕೋಲ್ ಹಾಗೂ ಪ್ಲಾಸ್ಟಿಕ್ ಮೈಕೋಬೀಡ್‌ಗಳಿಂದ ತಯಾರಿಸಿದ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಲ್ಲದೇ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹೊಟೇಲ್, ಕ್ಯಾಂಟೀನ್, ಸಭೆ ಸಮಾರಂಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳನ್ನು ಬಳಸುವುದನ್ನು ಸಹ ನಿಷೇಧಿಸಲಾಗಿದೆ.

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಸರಬರಾಜು, ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ಪುರಸಬಾ ಆಡಳಿತಾಧಿಕಾರಿ ಕುಂದಾಪುರದ ಸಹಾಯಕ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News