‘ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಮೊತ್ತ ಹೆಚ್ಚಳ’

Update: 2018-09-17 14:36 GMT

ಬೆಂಗಳೂರು, ಸೆ.17: ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಗಳಡಿ 65 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಾಶನವನ್ನು 600 ರೂ.ಗಳಿಂದ 1000 ರೂ.ಗಳಿಗೆ ಹೆಚ್ಚಿಸಿ ಪ್ರಸಕ್ತ ಸಾಲಿನ ನವೆಂಬರ್ 1ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಗಳಡಿ ಈಗಾಗಲೇ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಈ ಆದೇಶದಂತೆ ಹೆಚ್ಚಿಸಿರುವ ಮಾಸಾಶನ ಮೊತ್ತವನ್ನು ವಿತರಿಸಲು ಖಜಾನೆ ನಿರ್ದೇಶನಾಲಯದ ನಿರ್ದೇಶಕರು ಹಾಗೂ ಜಿಲ್ಲಾ ಖಜಾನಾಧಿಕಾರಿಗಳು, ಉಪ ಖಜಾನಾಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.

ಮುಂದುವರೆದು, ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯಡಿ 60 ರಿಂದ 64 ವರ್ಷ ವಯಸ್ಸಿನ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಾಶನ ಮೊತ್ತವನ್ನು 600 ರೂ.ರಂತೆಯೇ ಮುಂದುವರೆಸಲು ಆದೇಶಿಸಿದೆ ಎಂದು ಕಂದಾಯ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ(ಪ್ರ)ಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News