ತೆಂಕನಿಡಿಯೂರು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

Update: 2018-09-17 15:45 GMT

ಉಡುಪಿ, ಸೆ.17: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2018-19ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನೆ ಇತ್ತೀಚೆಗೆ ತೆಂಕನಿಡಿಯೂು ಗ್ರಾಪಂ ಸಭಾಂಗಣದಲ್ಲಿ ಜರಗಿತು.

ಉಡುಪಿ ಶಾಸಕ ಕೆ. ರಘುಪತಿ ಭಟ್ ಸಮಿತಿಯನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ವಿದ್ಯಾರ್ಜನೆಯ ಜೊತೆಗೆ ತಮ್ಮ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕ ಒತ್ತನ್ನು ನೀಡಬೇಕು ಎಂದರು. ಮುಖ್ಯ ಅತಿಥಿಗಳಾಗಿ ಉಡುಪಿಯ ಉಪೇಂದ್ರ ಪೈ ಸ್ಮಾರಕ ಕಾಲೇಜಿನ ಪ್ರಾಂಶುಪಾಲ ಡಾ. ಮಧುಸೂದನ ಭಟ್ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ವಹಿಸಿದ್ದರು. ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಜಯಕುಮಾರ್ ಬೆಳ್ಕಳೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪ್ರಸಾದ್‌ರಾವ್ ಎಂ., ಪ್ರೊ.. ರಾಮಚಂದ್ರ ಪಾಟ್ಕರ್, ದಯಾನಂದ ಶೆಟ್ಟಿ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಅಧ್ಯಕ್ಷ ಪ್ರಜ್ವಲ್ ಸ್ವಾಗತಿಸಿದರು. ಸ್ವಾತಿ ರಾವ್ ಬಿ. ವಂದಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಹಾಗೂ ಪ್ರೊ. ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದಭರ್ದಲ್ಲಿ ಕಾಲೇಜಿನ ಸಂಚಿಕೆ ‘ಸುದರ್ಶನ’ವನ್ನು ಶಾಸಕರು ಬಿಡುಗಡೆಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News