ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮುಖ್ಯಮಂತ್ರಿಗೆ ಅಭಿನಂದನೆ

Update: 2018-09-17 16:59 GMT

ಬೆಂಗಳೂರು, ಸೆ.17: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂ. ಇಳಿಸಿರುವುದರಿಂದ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆ ಹಾಗೂ ಪ್ರವಾಸೋದ್ಯಮಿಗಳು ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ ಎಂದು ಬೆಂಗಳೂರು ಪ್ರವಾಸಿ ವಾಹನ ಮಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅಭಿನಂದನೆ ಸಲ್ಲಿಸಿದ್ದಾರೆ.

ಏನೇ ಆದರೂ ಇದು ತಾತ್ಕಾಲಿಕ ಪರಿಹಾರ. ಇಂಧನ ಬೆಲೆ ಸಂಬಂಧ ಶಾಶ್ವತ ಪರಿಹಾರ ಸಿಗಬೇಕಿದ್ದರೆ ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕಾದ್ದು ಅನಿವಾರ್ಯ. ಆ ನಿಟ್ಟಿನಲ್ಲೂ ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿ ಎಂದು ಅವರು ಪ್ರಕಟನೆಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News