ಬಿ.ಸಿ.ರೋಡ್: ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಚುನಾವಣಾ ಕಾರ್ಯಾಗಾರ

Update: 2018-09-18 08:09 GMT

ಬಂಟ್ವಾಳ, ಸೆ.18: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್(ಎಸ್ಸೆಸ್ಸೆಫ್)ನ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಮೊದಲ ಹಂತದ ಚುನಾವಣಾ ಕಾರ್ಯಾಗಾರವು ಮಂಗಳವಾರ ಬಿ.ಸಿ.ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಎಸ್.ಜೆ.ಯು. ಪ್ರಧಾನ ಕಾರ್ಯದರ್ಶಿ ಎಸ್.ಪಿ.ಹಂಝ ಸಖಾಫಿ ಬಂಟ್ವಾಳ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ  ಸುನ್ನೀ ಕೋ ಓರ್ಡಿನೇಶನ್ ನ ಪ್ರ.ಕಾರ್ಯದರ್ಶಿ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಣ ದುಆ ನೆರವೇರಿಸಿದರು.

ಎಸ್.ವೈ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಎಂ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ 'ಹೊಸ ಕಾರ್ಯಕರ್ತರ ಸೃಷ್ಟಿ' ಎಂಬ ವಿಷಯದಲ್ಲಿ ತರಗತಿ ನಡೆಸಿದರು.

ರಾಜ್ಯ ಚುನಾವಣಾ ಮಂಡಳಿಯ ಕನ್ವೀನರ್ ಹಾಫಿಳ್ ಯಾಕೂಬ್ ಸಅದಿ ನಾವೂರು ಚುನಾವಣಾ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಚುನಾವಣಾ ಮಂಡಳಿಯ ಅಧ್ಯಕ್ಷ ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವಕೇಟ್ ಇಲ್ಯಾಸ್ ನಾವುಂದ, ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ, ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ, ಉಡುಪಿ ಜಿಲ್ಲಾಧ್ಯಕ್ಷ ಅಶ್ರಫ್ ಅಂಜದಿ, ರಾಜ್ಯ ನಾಯಕರಾದ ಉಸ್ಮಾನ್ ಹಂಡುಗುಳಿ, ಇಸ್ಮಾಯೀಲ್ ಮಾಸ್ಟರ್ ಮೊಂಟೆಪದವು, ಹುಸೈನ್ ಸಅದಿ ಹೊಸ್ಮಾರ್, ಅಡ್ವಕೇಟ್ ಶಾಕಿರ್ ಹಾಜಿ ಮಿತ್ತೂರು, ತಾಜುದ್ದೀನ್ ಫಾಳಿಲ್, ನವಾಝ್ ಭಟ್ಕಳ್, ಇಬ್ರಾಹೀಂ ಚಿಕ್ಕಮಗಳೂರು ಮೊದಲಾದವರು ಉಪಸ್ಥಿತರಿದ್ದರು. 

ದಕ್ಷಿಣ ಕರ್ನಾಟಕದ ಹತ್ತು ಜಿಲ್ಲೆಗಳ ನಾಯಕರು ಭಾಗವಹಿಸಿ ಕಾರ್ಯಾಗಾರದ ಸದುಪಯೋಗವನ್ನು ಪಡೆದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ನಗರ ಸ್ವಾಗತಿಸಿದರು. ರಾಜ್ಯ ಸದಸ್ಯ ರವೂಫ್ ಖಾನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News