ಪಿಲಾತಬೆಟ್ಟು ಗ್ರಾಪಂ: 94ಸಿ ಹಕ್ಕು ಪತ್ರ ವಿತರಣೆ

Update: 2018-09-18 12:15 GMT

ಬಂಟ್ವಾಳ, ಸೆ. 18: ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮತ್ತು ಪಿಲಾತಬೆಟ್ಟು ಹಾಗೂ ಇರ್ವತ್ತೂರು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ 94 ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ಜರಗಿತು.

ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಬಂಟ್ವಾಳ ತಾಲೂಕು ಪಿಲಾತಬೆಟ್ಟು ಮತ್ತು ಇರ್ವತ್ತೂರು ಗ್ರಾಪಂ ವ್ಯಾಪ್ತಿಯಲ್ಲಿನ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು. ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

ಜಿಪಂ ಸದಸ್ಯ ಎಂ. ತುಂಗಪ್ಪ ಬಂಗೇರ, ತಾಪಂ ಸದಸ್ಯ ರಮೇಶ್ ಕುಡ್ಮೇರ್, ಇರ್ವತ್ತೂರು ಗ್ರಾಪಂ ಅಧ್ಯಕ್ಷೆ ಸುಜಾತಾ ಪ್ರಕಾಶ್, ಉಪಾಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರ್, ಕಂದಾಯ ನಿರೀಕ್ಷಕ ನವೀನ್ ಕೆ., ಪಿಲಾತಬೆಟ್ಟು ಪಂ.ಅ.ಅಧಿಕಾರಿ ರಾಜಶೇಖರ ರೈ, ಇರ್ವತ್ತೂರು ಪಂ.ಅ.ಅಧಿಕಾರಿ ಅವಿನಾಶ್, ಗ್ರಾಮಕರಣಿಕ ರಾಜು, ಸಿ.ಎ.ಬ್ಯಾಂಕ್ ಉಪಾಧ್ಯಕ್ಷೆ ಲಕ್ಷ್ಮಿಜೆ. ಬಂಗೇರ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ವಿಕಲಚೇತನರಿಗೆ ಸಹಾಯಧನ, ಉಜ್ವಲ ಯೋಜನೆಯ ಗ್ಯಾಸ್ ಕಿಟ್, ಪ್ರಕೃತಿ ವಿಕೋಪ ಪರಿಹಾರ ಸಹಾಯಧನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವಂತೆ ಶಾಸಕರಲ್ಲಿ ಮನವಿ ಸಲ್ಲಿಸಲಾಯಿತು. ಕಂದಾಯ ನಿರೀಕ್ಷಕ ನವೀನ್ ಅವರು ಸ್ವಾಗತಿಸಿದರು. ರಾಜಶೇಖರ ರೈ ವಂದಿಸಿದರು. ಭರತ್ ರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News