ಸೆ.19: ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ
Update: 2018-09-18 19:52 IST
ಉಡುಪಿ, ಸೆ.18: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಹಾಗೂ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯು ಸೆ.19ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.