ತೊಕ್ಕೊಟ್ಟು: ದೈಹಿಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Update: 2018-09-18 14:58 GMT

ಮಂಗಳೂರು, ಸೆ.18: ಶಾಲಾ ಮಕ್ಕಳಲ್ಲಿ ದೈಹಿಕ ಸಧೃಡತೆಯಿದ್ದಲ್ಲಿ ಮಾನಸಿಕ ಸಧೃಡತೆ ಕಾಪಾಡಲು ಸಾಧ್ಯ. ಈ ಕೆಲಸವನ್ನು ದೈಹಿಕ ಶಿಕ್ಷಕರು ಮಾಡುತ್ತಾ ಬಂದಿರುವುದು ಶ್ಲಾಘನೀಯ ಎಂದು ಪೆರ್ಮನ್ನೂರು ಸಂತ ಸೆಬಾಸ್ತಿಯನ್ನರ ಚರ್ಚ್‌ನ ಸಹಾಯಕ ಧರ್ಮಗುರು ಫಾ.ಲೈಝಿಲ್ ಡಿಸೋಜ ಅಭಿಪ್ರಾಯಪಟ್ಟರು.

ರಾಜ್ಯ ದೈಹಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದಕ್ಷಿಣ ವಲಯ ವತಿಯಿಂದ ತೊಕ್ಕೊಟ್ಟು ಸಂತ ಸೆಬಾಸ್ತಿಯನ್ ಶಾಲಾ ಸಭಾಂಗಣದಲ್ಲಿ ಮಂಗಳವಾರ ನಡೆದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ದೈಹಿಕ ಶಿಕ್ಷಕರಿಗೆ ಅಭಿನಂದನೆ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ದೈಹಿಕ ಶಿಕ್ಷಣಾಧಿಕಾರಿ ಲಿಲ್ಲಿ ಪಾಯಸ್ ಹಾಗೂ ದೈಹಿಕ ಶಿಕ್ಷಕ ಕೆ.ಎಚ್.ನಾಯಕ್ ಅವರನ್ನು ಅಭಿನಂದಿಸಲಾಯಿತು. ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ದಕ್ಷಿಣ ವಲಯ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ಸಂತ ಸೆಬಾಸ್ತಿಯನ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಅನಿತಾ ನತಾಲಿಯಾ, ಪಿ.ಡಿ.ಶೆಟ್ಟಿ, ತಾರಾನಾಥ ರೈ, ಪ್ರತೀಕ್, ಲೋಕನಾಥ ರೈ, ಪ್ರೀತಂ, ಉರ್ಬನ್ ಮಸ್ಕರೇನಸ್ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ತ್ಯಾಗಂ ಹರೇಕಳ ಅಭಿನಂದನಾ ಭಾಷಣ ಮಾಡಿದರು. ಬಾಲಕೃಷ್ಣ ಮತ್ತು ರೊನಾಲ್ಡ್ ಅಭಿನಂದನಾ ಪತ್ರ ವಾಚಿಸಿದರು. ರಾಜೀವ ನಾಯ್ಕ್ ಸ್ವಾಗತಿಸಿದರು. ಲ್ಯಾನ್ಸಿ ಸಿಕ್ವೇರ ವಂದಿಸಿದರು. ಶೇಖರ್ ಕಡ್ತಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News