ಹಮೀದ್ ಕುದ್ರೋಳಿ ನಿಧನ

Update: 2018-09-19 14:55 GMT

ಮಂಗಳೂರು, ಸೆ.19: ಮೂಲತಃ ಕುದ್ರೋಳಿಯ ಪ್ರಸ್ತುತ ಕೋಟೆಕಾರ್ ಸಮೀಪದ ಅಜ್ಜಿನಡ್ಕ ಬಳಿ ವಾಸವಾಗಿದ್ದ ಅಬ್ದುಲ್ ಹಮೀದ್ ಕುದ್ರೋಳಿ (58) ಬುಧವಾರ ಬೆಳಗ್ಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಇವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಕುದ್ರೋಳಿಯ ನಡುಪಳ್ಳಿಯ ವಠಾರದಲ್ಲಿ ನೆರವೇರಿಸಲಾಯಿತು.

ಎ.ಎಫ್. ಫಿಶರೀಸ್‌ನ ಪಾಲುದಾರನಾಗಿದ್ದ ಹಮೀದ್ ಕುದ್ರೋಳಿ ಕಾಂಗ್ರೆಸ್, ಜೆಡಿಎಸ್, ಎಸ್ಪಿ ಹಾಗೂ ಬಿಜೆಪಿ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರೂ ಕೂಡಾ ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆದಿದ್ದರು.

ಮೀನು ಮಾರಾಟ ಮತ್ತು ಕಮಿಷನ್ ಏಜೆಂಟರ ಸಂಘ, ದ.ಕ.ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ, ಅಖಿಲ ಭಾರತ ಬ್ಯಾರಿ ಪರಿಷತ್, ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕ ಮೊಯ್ದಿನ್ ಬಾವಾ ಮತ್ತಿತರರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಸಂತಾಪ: ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್, ಪದಾಧಿಕಾರಿಗಳಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಹಾಜಿ ಸಿ. ಮೆಹಮೂದ್, ಕೆ. ಅಶ್ರಫ್, ಹಾಜಿ ಬಾಷಾ ತಂಙಳ್, ಮುಹಮ್ಮದ್ ಹನೀಫ್, ಹಾಜಿ ಬಿ. ಅಬೂಬಕರ್, ಡಿ.ಎಂ.ಅಸ್ಲಂ, ಹಾಜಿ ರಿಯಾಝುದ್ದೀನ್, ಸಿ.ಎಂ. ಹನೀಫ್, ಹಾಜಿ ಮುಹಮ್ಮದ್ ಬಪ್ಪಳಿಗೆ, ಎಂ.ಎ. ಅಶ್ರಫ್, ಸಿ.ಎಂ. ಮುಸ್ತಫಾ, ಮುಸ್ಲಿಂ ವರ್ತಕರ ಸಂಘದ ಮುಖಂಡರಾದ ಅಲಿ ಹಸನ್, ಯಾಸೀನ್ ಕುದ್ರೋಳಿ, ಕಾರ್ಪೊರೇಟರ್ ಅಝೀಝ್ ಕುದ್ರೋಳಿ, ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಕೆ. ಅಶ್ರಫ್ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News