ಸುಳ್ಳು ಹೇಳುವುದೇ ಬಿಜೆಪಿ ಬಂಡವಾಳ: ಸಿದ್ದರಾಮಯ್ಯ

Update: 2018-09-19 14:04 GMT

ಹೊಸದಿಲ್ಲಿ, ಸೆ.19: ಬಿಜೆಪಿಯವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ. ಅವರಿಗೆ ಸುಳ್ಳು ಬಿಟ್ಟರೆ ಬೇರೆ ಏನು ಗೊತ್ತಿಲ್ಲ. ಸುಳ್ಳು ಹೇಳುವುದೇ ಅವರ ಬಂಡವಾಳ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಮಾಡಿರುವ ಆರೋಪದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಾಡಿರುವ ಆರೋಪಗಳು ಕಾಂಗ್ರೆಸ್ ಮೇಲೆ ಯಾವ ಪರಿಣಾಮವು ಬೀರುವುದಿಲ್ಲ ಎಂದರು.

ಶಿವಕುಮಾರ್ ಜೊತೆ ನಾನು ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರೇ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಮಾತನಾಡಲಿದ್ದಾರೆ. ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ವಿಧಾನಪರಿಷತ್ತಿನ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಪೂರ್ಣವಾಗಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜೊತೆ ಚರ್ಚೆ ಮಾಡಿದ ಬಳಿಕ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News