ಹಿರಿಯಡಕ: ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

Update: 2018-09-19 14:50 GMT

ಉಡುಪಿ, ಸೆ.19: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆ, ಸೇವಾ ಮನೋಭಾವ, ಸಮಯಪಾಲನೆಯನ್ನು ಮೂಡಿಸಿ ವ್ಯಕ್ತಿತ್ವ ವಿಕಸನಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ನಿವೃತ್ತ ಸಂಗೀತ ಅಧೀಕ್ಷಕಿ ಚಂಪಕ ಹೇಳಿದ್ದಾರೆ.

ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2018-19ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡು ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಮಾತನಾಡಿ, ಎನ್ನೆಸ್ಸೆಸ್ ಯೋಜನಾಧಿಕಾರಿಯಾಗಿ ಸಲ್ಲಿಸಿದ ಸೇವೆಯ ಅನುವಗಳನ್ನು ಹಂಚಿಕೊಂಡರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ.ಎಸ್., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ, ಸುಬಾಷ್ ಹೆಚ್.ಕೆ., ವಿದ್ಯಾರ್ಥಿ ನಾಯಕ ರಾದ ಅವಿನಾಶ್, ಸಾಕ್ಷಿತಾ, ವಿಜೇತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯ ಕ್ರಮದಲ್ಲಿ ಚಂಪಕರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ.ಎಸ್., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ, ಸುಬಾಷ್ ಹೆಚ್.ಕೆ., ವಿದ್ಯಾರ್ಥಿ ನಾಯಕ ರಾದ ಅವಿನಾಶ್, ಸಾಕ್ಷಿತಾ, ವಿಜೇತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯ ಕ್ರಮದಲ್ಲಿ ಚಂಪಕರನ್ನು ಸನ್ಮಾನಿಸಲಾಯಿತು. ಸಾಕ್ಷಿತಾ ಇವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸುಭಾಷ್ ಹೆಚ್. ಕೆ. ಸ್ವಾಗತಿಸಿದರು. ಪ್ರವೀಣ ಶೆಟ್ಟಿ ವಂದಿಸಿದರು. ರಾಹುಲ್ ಕೆ. ಎಸ್. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News