ಅಣಕು ನ್ಯಾಯಾಲಯದಿಂದ ವಾದ ಮಂಡನೆಯಲ್ಲಿ ಪ್ರಾವೀಣ್ಯತೆ ಸಾಧಿಸಲು ಸಾಧ್ಯ: ಪ್ರೊ.ಈಶ್ವರ್ ಭಟ್

Update: 2018-09-19 15:37 GMT

ಉಡುಪಿ, ಸೆ.19: ವಾದ ಮಂಡನೆಯಲ್ಲಿ ಪ್ರಾವೀಣ್ಯ ಸಾಧಿಸಲು ವಿದ್ಯಾರ್ಥಿ ಗಳು ಅಣಕು ನ್ಯಾಯಾಲಯ ಕಲಾಪಗಳಲ್ಲಿ ಹಾಗೂ ಚರ್ಚಾ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಕಾನೂನು ವಿಶ್ವವಿದ್ಯಾ ಲಯದ ಉಪಕುಲಪತಿ ಪ್ರೊ.ಪಿ.ಈಶ್ವರ ಭಟ್ ಹೇಳಿದ್ದಾರೆ.

ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಕಾಲೇಜಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಕಾರ್ಯನಿರ್ವಾಹಕ ಮಂಡಳಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡುತಿದ್ದರು.

ಕಾನೂನು ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನಕ್ಕೆ ಅಗತ್ಯವಾದ ವೃತ್ತಿ ಕೌಶಲ್ಯ ಗಳನ್ನುವಿದ್ಯಾರ್ಥಿ ಜೀವನದಿಂದಲ್ಲೇ ಗಳಿಸಲು ಪ್ರಯತ್ನಿಸಬೇಕು. ಕಾನೂನಿನ ಜೊತೆಯಲ್ಲೇ ಕಲೆ ಸಾಹಿತ್ಯ, ಮಾನವಿಕ ಶಾಸ್ತ್ರಗಳ ಅಧ್ಯಯನಕ್ಕೂ ಮಹತ್ವ ನೀಡಿದಲ್ಲಿ ವೃತ್ತಿ ಜೀವನದಲ್ಲಿ ಅಪಾರ ಯಶಸ್ಸು ಸಾಧಿಸಬಹುದಾ ಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಅಶೋಕ ಪೈ ವಹಿಸಿದ್ದರು. ವಿದ್ಯಾರ್ಥಿ ನಾಯಕರಾದಶರತ್ ಹಾಗೂ ಭಾವಿಷ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸಿಸಿಲಿಯಾ ಡಿಸೋಜ ಉಪಸ್ಥಿತರಿದ್ದರು. ಕಾಲೇಜಿನ ಹಳೆಯ ವಿದ್ಯಾರ್ಥಿಯೂ ಆಗಿರುವ ರಾಜ್ಯ ಕಾನೂನು ವಿಶ್ವವಿದ್ಯಾಲಯ ಉಪಕುಲಪತಿ ಈಶ್ವರ ಭಟ್ ಹಾಗೂ ಕಳೆದ ಸಾಲಿನ ಪರೀಕ್ಷೆಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ ಕಣಿವೆ ಸ್ವಾಗತಿಸಿದರು. ಪ್ರಾಧ್ಯಾಪಕ ಬಿ.ಜಿ.ಶಂಕರಮೂರ್ತಿ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿನಿ ಶಾಹಿಸಾತಿ ವಂದಿಸಿದರು. ವಿದ್ಯಾರ್ಥಿನಿ ಸುಚೇತಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News