ಕಾರ್ಕಳದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ, ಜಾಗೃತಿ ಕಾರ್ಯಕ್ರಮ

Update: 2018-09-19 16:53 GMT

ಉಡುಪಿ, ಸೆ.19: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕಂದೂರು ಹಾಗೂ ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜು ಕುಕ್ಕಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ- ಜಾಗೃತಿ ಕಾರ್ಯಕ್ರಮ ನಡೆಯಿತು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ಆಸ್ಪತ್ರೆ ಉಡುಪಿಯ ಮಾನಸಿಕ ಆರೋಗ್ಯ ತಜ್ಞ ಡಾ. ಮಾನಸ್ ಇ.ಆರ್. ಮಾತನಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು, ಯಾವ ರೀತಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು, ಯಾವ ರೀತಿ ಯುವ ಜನಾಂಗ ಮಾದಕ ವ್ಯಸನಕ್ಕೆ ಬಲಿಯಾಗಿ ಜೀವನವನ್ನು ಹಾಳುಮಾಡಿ ಕೊಳ್ಳುತ್ತಿದೆ, ಒತ್ತಡ ನಿವಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳೇನು ಎಂಬ ಬಗ್ಗೆ ಸಮಗ್ರ ಮಾಹಿತಿ ನೀಡಿರು.

ಕೆ.ಎಂ.ಇ.ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ನೆಲ್ಲಿಕಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಶಶಿಧರ್ ಎಚ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಹಿರಿಯ ಆರೋಗ್ಯ ಸಹಾಯಕ ಶಿವರಾಮ್ ರಾವ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News