ಹೆಬ್ರಿ: ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Update: 2018-09-19 16:54 GMT

ಉಡುಪಿ, ಸೆ.19: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಹೆಬ್ರಿಯ ಸುತ್ತಮುತ್ತ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಯಿತು.

ಈ ಸಂದರ್ಭದಲ್ಲಿ 17 ಪ್ರಕರಣ ದಾಖಲಿಸಿ 2300 ರೂ. ದಂಡ ವಸೂಲಿ ಮಾಡಲಾಯಿತು. ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು. ಎಲ್ಲಾ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತು ಸಿಗರೇಟ್ ಮಾರಾಟವಾಗುತ್ತಿರುವ ಕುರಿತು ಪ್ರಾಂಶುಪಾಲರ ಗಮನ ಸೆಳೆಯಲಾಯಿತು.

ದಾಳಿಯಲ್ಲಿ ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಆನಂದ ಗೌಡ, ಹಿರಿಯ ಆರೋಗ್ಯ ಮೇಲ್ವಿಚಾರಕ ಕೃಷ್ಣಪ್ಪ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಕಾರ್ಕಳದ ಹಿರಿಯ ಆರೋಗ್ಯ ಸಹಾಯಕ ಶಿವರಾಮ ಭಟ್ ಮುಂತಾದವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News