ಬಂಟ್ವಾಳ : ಗೂಡಿನಬಳಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ?

Update: 2018-09-19 17:33 GMT

ಬಂಟ್ವಾಳ, ಸೆ‌. 19:  ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಮೂವರು ದುಷ್ಕರ್ಮಿಗಳು ಮಾನಭಂಗಕ್ಕೆ ಯತ್ನಿಸಿದ  ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. 

ಗೂಡಿನಬಳಿಯ ಗುಜಿರಿ ಅಂಗಡಿ ವ್ಯಾಪಾರಿ ಶೇಕಬ್ಬ, ರಝಾಕ್, ನವಾಝ್ ಆರೋಪಿಗಳು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಮೂವರು ಸುಮಾರು ಎಂಟು ವರ್ಷದ ಬಾಲಕಿಯ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆಂದು ಹೇಳಲಾಗಿದೆ. ಮೂವರು ಆರೋಪಿಗಳ ಪೈಕಿ ಓರ್ವ 80 ವರ್ಷದ ವೃದ್ಧ ಕೂಡಾ ಸೇರಿದ್ದಾನೆಂದು ಹೇಳಲಾಗುತ್ತಿದೆ. ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಘಟನೆಗೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.  

ಈ ಘಟನೆ ಸುಮಾರು ಎರಡು ವಾರ ಹಿಂದೆಯೇ ನಡೆದಿದ್ದು ಬಾಲಕಿ ಗೂಡಿನಬಳಿಯಲ್ಲಿರುವ ತನ್ನ ಅಜ್ಜಿಯ ಮನೆಗೆ ಬಂದಾಗ  ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ. ಬಾಲಕಿಯ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಈ ಸಂಬಂಧ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.  ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಾಗಿದ್ದು ಬಂಟ್ವಾಳ ಪೊಲೀಸರು ಈವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News