ಮೈಸೂರು ಜಿ.ಪಂ ನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಕೆ: ಸಚಿವ ಸಾ.ರಾ.ಮಹೇಶ್

Update: 2018-09-19 17:30 GMT

ಮೈಸೂರು,ಸೆ.19: ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ಮುಂದುವರೆಯಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲಾಪಂಚಾಯಿತಿಯಲ್ಲಿ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಪಕ್ಷದ ನಯೀಮಾ ಸುಲ್ತಾನ ನಜೀರ್ ಅಹಮದ್ ಅವರು ಅಧ್ಯಕ್ಷರಾಗಿದ್ದರು. ಅವರ ಅವಧಿ ಮುಗಿದಿರುವ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಹೊಸ ಅಧ್ಯಕ್ಷರ ನೇಮಕವಾಗಬೇಕಿದೆ. ಎಂದಿನಂತೆ ನಾವು ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸಿ ಜಿ.ಪಂ ಅವಧಿ ಮುಗಿಯುವವರೆಗೂ ಮೈತ್ರಿ ಮುಂದುವರೆಸುವುದಾಗಿ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News