ಮಂಗಳೂರು ಬಿಷಪ್‌ಗೆ ಪತ್ರಕರ್ತರ ಸಂಘದಿಂದ ಸನ್ಮಾನ

Update: 2018-09-19 17:41 GMT

ಮಂಗಳೂರು, ಸೆ.19: ಮಂಗಳೂರು ಧರ್ಮ ಪ್ರಾಂತದ ನೂತನ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನಾ ಅವರನ್ನು ದ.ಕ.ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಬಿಷಪ್ ಹೌಸ್‌ನಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ಮಾತನಾಡಿದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನಾ ಪತ್ರಕರ್ತರು ಸಮಾಜದ ಕಣ್ಣಿದ್ದಂತೆ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರು ಮಾನವೀಯ ವೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ದಯಾನಂದ ಕುಕ್ಕಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News