ಮಂಡ್ಯ: ನಾಲೆಗೆ ಬಿದ್ದು ವ್ಯಕ್ತಿ ಮೃತ್ಯು

Update: 2018-09-19 18:02 GMT

ಮಂಡ್ಯ, ಸೆ.19: ಶಿಂಷಾ ಬಲದಂಡೆ ನಾಲೆಗೆ ಬಿದ್ದು ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮದ್ದೂರು ತಾಲೂಕಿನ ಚಾಪುರದೊಡ್ಡಿ ನಿವಾಸಿಯಾಗಿ ಮಹದೇವು(35) ಮೃತ ವ್ಯಕ್ತಿ. ಅವರು ನಾಲೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News