ಗೂಡಿನಬಳಿ ಬಾಲಕಿಯ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂಮೆಂಟ್, ಪಿಎಫ್‍ಐ ಖಂಡನೆ

Update: 2018-09-20 13:04 GMT

ಬಂಟ್ವಾಳ, ಸೆ. 20: ತಾಲೂಕಿನ ಗೂಡಿನಬಳಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ವಿಮೆನ್ ಇಂಡಿಯಾ ಮೂಮೆಂಟ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಿಎಫ್‍ಐ ತಾಲೂಕು ಘಟಕ ಖಂಡಿಸಿದೆ.

ಪೊಲೀಸ್ ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಅಲ್ಲದೆ, ಈ ಪ್ರಕರಣದ ಆರೋಪಿಗಳಿಗೆ ಗರಿಷ್ಠ ಮಟ್ಟದ ಶಿಕ್ಷೆಯಾಗುವಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಪ್ರಕರಣದ ಬಾಲಕಿಗೆ ಸೂಕ್ತ ನ್ಯಾಯವನ್ನು ಹಾಗೂ ಕುಟುಂಬಕ್ಕೆ ರಕ್ಷಣೆಯನ್ನು ಒದಗಿಸಬೇಕೆಂದು ಪಿಎಫ್‍ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಹಾಗೂ ವಿಮೆನ್ ಇಂಡಿಯಾ ಮೂಮೆಂಟ್‍ನ ಅಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಅವರು ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News