ವಾಯುಭಾರ ಕುಸಿತ ಹಿನ್ನೆಲೆ: ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ

Update: 2018-09-20 14:09 GMT

ಬೆಂಗಳೂರು, ಸೆ.20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಎಸ್.ಆರ್.ಪಾಟೀಲ್, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಕೂಡ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಯಾ ಜಿಲ್ಲೆಗಳಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜಧಾನಿಯಲ್ಲಿ ಮಳೆ: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಎಂಜಿ ರಸ್ತೆ, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ಶ್ರೀನಿವಾಸನಗರ, ಹನುಮಂತನಗರ, ಮೈಸೂರು ರಸ್ತೆ, ಕೆಂಗೇರಿ ಸೇರಿದಂತೆ ಹಲವೆಡೆ ಭಾರಿ ಮಳೆ ಸುರಿದಿದೆ. ಇನ್ನೂ ಹಲವು ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿದ ಕಾರಣ ವಾಹನ ಸಂಚಾರ ವ್ಯತ್ಯಯವಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News