×
Ad

ಮಂಗಳೂರು: ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆಗೆ ಯತ್ನ

Update: 2018-09-20 19:59 IST

ಮಂಗಳೂರು, ಸೆ.20: ನಗರದ ಫಳ್ನೀರ್‌ನಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ರೋಗಿಯೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಆಸ್ಪತ್ರೆಯ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಮೂಲತಃ ಮೈಸೂರಿನ ಪ್ರಸ್ತುತ ಅತ್ತಾವರ ನಿವಾಸಿ ನವೀನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ವೈಯಕ್ತಿಕ ಕಾರಣದಿಂದ ಬೇಸತ್ತು ಕೆಲದಿನಗಳ ಹಿಂದೆ ರಾಸಾಯನಿಕ ವಸ್ತುವೊಂದನ್ನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಇದನ್ನು ನೋಡಿದ ಆತನ ಸಂಬಂಧಿಕರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಯ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದ ಈತನ ಆರೋಗ್ಯ ಸುಧಾರಣೆಯಾಗುತ್ತಿತ್ತು. ಆದರೆ ಮಾನಸಿಕವಾಗಿ ನೊಂದಿದ್ದ ಈತ ಗುರುವಾರ ಮಧ್ಯಾಹ್ನ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿರುವ ಕಿಟಕಿಯ ಗ್ಲಾಸ್ ಹೊಡೆದು ಕೆಳಗೆ ಹಾರಿದ್ದಾನೆ ಎನ್ನಲಾಗಿದೆ. ಇದನ್ನು ಆಸ್ಪತ್ರೆ ಸಿಬ್ಬಂದಿ ಗಮನಿಸಿ ತಕ್ಷಣ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದಾರೆ. ಆದರೆ ಯಾವುದೇ ಪ್ರಾಣಾಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News