ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರಕಟ: ಕೊಹ್ಲಿ, ಚಾನುಗೆ ಖೇಲ್‌ರತ್ನ

Update: 2018-09-20 14:33 GMT

ಹೊಸದಿಲ್ಲಿ, ಸೆ.20: ಕ್ರೀಡಾಕ್ಷೇತ್ರದ ಅತ್ಯುನ್ನತ ಪುರಸ್ಕಾರವಾಗಿರುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಆಯ್ಕೆಯಾಗಿದ್ದಾರೆ.

  ಕೇಂದ್ರ ಕ್ರೀಡಾ ಸಚಿವಾಲಯವು ಖೇಲ್‌ರತ್ನ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿಗೆ ಆಯ್ಕೆಯಾಗಿರುವ ಕ್ರೀಡಾಪಟುಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಜೋಪ್ರಾ ಸೇರಿದಂತೆ 20 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ , 8 ಮಂದಿಗೆ ದ್ರೋಣಾಚಾರ್ಯ ಮತ್ತು 4 ಮಂದಿ ಧ್ಯಾನ್‌ಚಂದ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

  ಸೆಪ್ಟಂಬರ್ 25ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಿರುವರು.

   ಖೇಲ್ ರತ್ನ 7.5 ಲಕ್ಷ ರೂ. ನಗದು , ಪದಕ ಮತ್ತು ಸ್ಮರಣಿಕೆ. ಅರ್ಜುನ ಪ್ರಶಸ್ತಿ ,ದ್ರೋಣಾಚಾರ್ಯ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ತಲಾ 5 ಲಕ್ಷ ರೂ. ನಗ  ದು ಹಾಗೂ ಸ್ಮರಣಿಕೆ ಒಳಗೊಂಡಿವೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News