ಕುಮಟಾ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2018-09-20 14:50 GMT

ಕುಮಟಾ,ಸೆ.19: ತಾಲೂಕಿನ ಖಂಡಗಾರ ರೈಲ್ವೆ ಹಳಿಯ ಪಕ್ಕದಲ್ಲಿ ಅಪರಿಚಿತ ಪುರುಷನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. 

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಖಂಡಗಾರ ರೈಲ್ವೆ ಹಳಿಯ ಪಕ್ಕದಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. 

ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News