ಏರ್‌ಸೆಲ್-ಮ್ಯಾಕ್ಸಿಸ್ ತನಿಖೆ ಪೂರ್ಣಗೊಳಿಸಲು ಇಡಿಗೆ 3 ತಿಂಗಳ ಕಾಲಾವಕಾಶ

Update: 2018-09-20 15:01 GMT

ಹೊಸದಿಲ್ಲಿ, ಸೆ. 20: ಏರ್‌ಸೆಲ್-ಮ್ಯಾಕ್ಸಿಸ್ ಒಪ್ಪಂದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಜಾರಿ ನಿರ್ದೇಶನಾಲಯಕ್ಕೆ ನೀಡಿದ ಗಡುವನ್ನು ಸುಪ್ರೀಂ ಕೋರ್ಟ್ ಗುರುವಾರ ಮೂರು ತಿಂಗಳು ವಿಸ್ತರಿಸಿದೆ. ತನಿಖೆಯನ್ನು ಮೂರು ತಿಂಗಳ ಒಳಗೆ ಪೂರ್ಣಗೊಳಿಸಬೇಕು ಎಂದು ನ್ಯಾಯಮೂರ್ತಿ ಎ.ಕೆ. ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರನ್ನು ಒಳಗೊಂಡ ಪೀಠ ಹೇಳಿದೆ.

ಜಾರಿ ನಿರ್ದೇಶನಾಲಯದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಲವು ಇಮೇಲ್‌ಗಳೊಂದಿಗೆ ಆರೋಪಿಗಳನ್ನು ಎದುರಿಸುವುದು ಅಗತ್ಯವಾದುದರಿಂದ ತನಿಖೆ ಪೂರ್ಣಗೊಳಿಸಲು ಒಂದೆರಡು ತಿಂಗಳುಗಳ ಅಗತ್ಯತೆ ಇದೆ ಎಂದು ತಿಳಿಸಿದರು. ಪ್ರಕರಣದ ತನಿಖೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಮಾರ್ಚ್‌ನಲ್ಲಿ ಜಾರಿ ನಿರ್ದೇಶನಾಲಯಕ್ಕೆ 6 ತಿಂಗಳು ಗಡುವು ನೀಡಿತ್ತು. 2ಜಿ ಸ್ಪೆಕ್ಟ್ರಂ ಪ್ರಕರಣದ ಸಂದರ್ಭ ಬಹಿರಂಗಗೊಂಡ ಏರ್‌ಸೆಲ್-ಮ್ಯಾಕ್ಸಿಸ್ ಒಪ್ಪಂದದಲ್ಲಿ ಹಣ ಅಕ್ರಮ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News