×
Ad

ಕುಂಬಳೆ : ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಯುವಕ ಗಂಭೀರ

Update: 2018-09-20 21:04 IST

ಮಂಜೇಶ್ವರ,ಸೆ.20 : ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ. ಗುರುವಾರ ಬೆಳಗ್ಗೆ ಆರಿಕ್ಕಾಡಿ ಶಿರಿಯಾ ಹಾದಿಯಲ್ಲಿ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಉಡುಪಿ ನಿವಾಸಿ ಕೀರ್ತನ್ ಶೆಟ್ಟಿ(35) ಎಂದು ಗುರುತಿಸಲಾಗಿದೆ.

ಚೆನ್ನೈ ಮಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೀರ್ತನ್ ರೈಲಿನಿಂದ ಹೊರಕ್ಕೆಸೆಯಲ್ಪಟ್ಟಿದ್ದಾರೆನ್ನಲಾಗಿದೆ. ಈ ವೇಳೆ ರೈಲು ಹಳಿಯಲ್ಲಿ ಕಾಮಗಾರಿ ನಡೆಸುತ್ತಿದ್ದ ಉಪ್ಪಳದ ಕುಬನೂರು ನಿವಾಸಿ ಸದಾನಂದ ಯವಕನನ್ನು ಅಲ್ಲಿಂದ ಮೇಲಕ್ಕೆತ್ತಿ ಬಳಿಕ ಕುಂಬಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ತಲುಪಿದ ಕುಂಬಳೆ ಪೊಲೀಸರು ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News