ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆ

Update: 2018-09-20 18:03 GMT

ಉಡುಪಿ, ಸೆ.20: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳನ್ನು ಸೆ.26ರಂದು ಬೆಳಿಗ್ಗೆ 11ಗಂಟೆಯಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ, 2ರಂದು ಬೆಳಗ್ಗೆ 11ಗಂಟೆಯಿಂದ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ 28ರಂದು ಬೆಳಗ್ಗೆ 11ಗಂಟೆಯಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ದೂರು ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂದಪಟ್ಟಂತೆ ದೂರು ಅರ್ಜಿಗಳನ್ನು ನೀಡುವ ವರು ನೇರವಾಗಿ ಕರ್ನಾಟಕ ಲೋಕಾಯಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ, ದೂ.ಸಂ.: 0820-2527770, ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿ ದೂ.ಸಂ.: 0820- 2536661 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News